ಉಡುಪಿ ವೀಡಿಯೋ ಪ್ರಕರಣ: ಮುತ್ತಿಗೆ ಹಾಕಿದ 14 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್
ಹೈಲೈಟ್ಸ್: ಉಡುಪಿ ಕಾಲೇಜು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ಆರೋಪದ ಅಡಿಯಲ್ಲಿ 14 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇನ್ನು ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕುಟುಂಬದ ಬಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆಯ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ. ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳ್ತಿದ್ರಾ ಎಂದು ಶಕುಂತಲಾ ಅವರು ಪೋಸ್ಟ್ ಮಾಡಿದ್ದರು. ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ.
Comments
Log in to write reviews